ಹಿಜಾಬ್ ನಿಷೇಧ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ : ಸಿಎಂ – vishwanews24

Featured, ರಾಜ್ಯ ನ್ಯೂಸ್

ಹಿಜಾಬ್ ನಿಷೇಧ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ : ಸಿಎಂ

ಮೈಸೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ನಿಷೇಧವನ್ನು ಹಿಂದಕ್ಕೆ ಪಡೆದುಕೊಳ್ಳುವ ನಿರ್ಧಾರದ ಕುರಿತು ರಾಜಕೀಯ ಪಡಶಾಲೆಯಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಮುಂದಿನ ಲೋಕ ಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಸಿಎಂ ಈ ಹೇಳಿಕೆಯನ್ನು ನೀಡಿದ್ದಾರೆ ಅನ್ನುವ ಆರೋಪವನ್ನು ವಿರೋಧ ಪಕ್ಷದವರು ಮಾಡುತ್ತಿದ್ದಾರೆ.

ಕೆಲವು ಮುಸ್ಲಿಂ ಬಾಂಧವರು ಸಿಎಂ ಸಿದ್ಧರಾಮಯ್ಯ ಅವರ ನಡೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಉಡುಪಿ: ಹಿಜಾಬ್ ವಿಚಾರ  – ಆದೇಶ ಕೈ ಸೇರಿದ ಬಳಿಕ ಇದಕ್ಕೆ ಸರಿಯಾದ ಉತ್ತರವನ್ನು ನೀಡುತ್ತೇವೆ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಈ ಮಧ್ಯೆ ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಿಎಂಗಳು ‘ಶುಕ್ರವಾರ ಕವಲಂದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಾರೋ ಒಬ್ಬರು ಈ ಬಗ್ಗೆ ಪ್ರಶ್ನೆ ಕೇಳಿದ್ದರು. ಅದಕ್ಕೆ ಉತ್ತರ ಕೊಟ್ಟಿದ್ದೇನೆ.

ಹಿಜಾಬ್ ನಿಷೇಧ ವಾಪಾಸ್ ಬಗ್ಗೆ ಯೋಚನೆ ಮಾಡಿದ್ದೀವಿ. ಈ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ’ ಎಂದರು.

Leave a Reply