ಹಿಜಾಬ್ ವಿವಾದ : ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ – Vishwanews24
ಹಿಜಾಬ್ ವಿವಾದ : ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್
ನವದೆಹಲಿ: ರಾಜ್ಯದಲ್ಲಿ ಭಾರೀ ವಿವಾದದ ಕಿಡಿ ಹೊತ್ತಿಸಿದ್ದ ಹಿಜಾಬ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಹಿಜಾಬ್ ಬ್ಯಾನ್ ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಬುಧವಾರ ಸಮ್ಮತಿ ನೀಡಿದ್ದು, ಮುಂದಿನ ವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
ಹಿಜಾಬ್ ಬ್ಯಾನ್ ಮಾಡಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕಳೆದ ಮಾರ್ಚ್ನಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೂ ಈ ವಿಚಾರವನ್ನು ಪಟ್ಟಿ ಮಾಡಿಲ್ಲ ಎಂದು ವಕೀಲ ಪ್ರಶಾಂತ್ ಭೂಷಣ್ ಅವರು ನ್ಯಾಯಾಲಯದ ಮುಂದೆ ಪ್ರಸ್ತುತ ಪಡಿಸಿದರು. ಬಳಿಕ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸಾಂವಿಧಾನಿಕ ಪೀಠವು ಮುಂದಿನ ವಾರ ಸೂಕ್ತ ಪೀಠದ ಮುಂದೆ ಈ ವಿಷಯವನ್ನು ಪಟ್ಟಿ ಮಾಡಲು ಒಪ್ಪಿಗೆ ಸೂಚಿಸಿತು.
ಕಾಪು : ಬಿಲ್ಲವ ಸಮಾಜದ ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ – Vishwanews24
