ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ : ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ
ಹಿಜಾಬ್ ವಿವಾದ ಸುಪ್ರೀಂ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ..
ಈ ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ..
ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ..
ಹಿಜಾಬ್ ವಿವಾದ – ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿ
ಉಡುಪಿ: ಹಿಜಾಬ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ನೀಡಿರುವ ವಿಭಿನ್ನ ತೀರ್ಪನ್ನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಸ್ವಾಗತಿಸಿದ್ದಾರೆ.
ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹಿಜಬ್ ಹೋರಾಟದ ನೇತೃತ್ವ ವಹಿಸಿದ ವಿದ್ಯಾರ್ಥಿನಿ. ಮಾರ್ಚ್ 15ರ ಹೈಕೋರ್ಟ್ ತೀರ್ಪಿನ ನಂತರ ಆಲಿಯಾ ಮತ್ತು ತಂಡ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿಲ್ಲ. ಇದೀಗ ಸುಪ್ರೀಂಕೋರ್ಟ್‍ನಲ್ಲಿ ದ್ವಿಸದಸ್ಯ ಪೀಠದಿಂದ ವಿಸ್ತೃತ ಪೀಠಕ್ಕೆ ವರ್ಗಾವಣೆಯಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಭರವೆಸಯ ಟ್ವೀಟ್ ಮಾಡಿದ್ದಾರೆ.
ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಮುನ್ಸೂಚನೆ.. ಕರಾವಳಿಗೆ ‘ಯೆಲ್ಲೋ’ ಅಲರ್ಟ್ ಘೋಷಣೆ.. Vishwanews24
ಈ ಬಗ್ಗೆ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದು ಕೊಂಡಿರುವ ಅವರು “ಈ ತೀರ್ಪು ಸಂತ್ರಸ್ತ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ. ಗೌರವಾನ್ವಿತ ನ್ಯಾಯಮೂರ್ತಿ ಧುಲಿಯಾ ಅವರ ಹೇಳಿಕೆಯು ನ್ಯಾಯಯುತವಾಗಿದ್ದು ತೀರ್ಪಿನಿಂದಾಗಿ ನಮ್ಮ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಮತ್ತು ಕನಿಷ್ಠ ಪಕ್ಷ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ. ಸಾವಿರಾರು ಹಿಜಾಬ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪುನರಾರಂಭಿಸಲು ಕಾಯುತ್ತಿದ್ದಾರೆ. ತವಕ್ಕಲ್ತು ಅಲ್ಲಾ” ಎಂದು ಹೇಳಿದ್ದಾರೆ.


