ಹುಲಿ ಉಗುರು ಪ್ರಕರಣ:ನಟ ಜಗ್ಗೇಶ್ ವಿರುದ್ಧ ದೂರು ದಾಖಲು – Vishwanews24
ಹುಲಿ ಉಗುರು ಪ್ರಕರಣ:ನಟ ಜಗ್ಗೇಶ್ ವಿರುದ್ಧ ದೂರು ದಾಖಲು
ಬೆಂಗಳೂರು:ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ ಅವರು ಹುಲಿ ಉಗುರು ಧರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ನಟ ಜಗ್ಗೇಶ್ ವಿರುದ್ಧ ಮಾಜಿ ಎಂಎಲ್ಸಿ ಪಿ.ಆರ್ ರಮೇಶ್, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ.
ವೀಡಿಯೋದಲ್ಲಿ ಅವರೇ ಇದು ಒರಿಜಿನಲ್ ಹುಲಿ ಉಗುರು ಅಂತ ಹೇಳಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳು ತನಿಖೆ ಕೈಗೊಳ್ಳಾಗುತ್ತದೆ ಎಂದಿದ್ದಾರೆ.
ಖ್ಯಾತ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂಬ ಆರೋಪ ಬಂದಿದ್ದು, ಜೊತೆಗೆ ವಿನಯ್ ಗುರೂಜಿ ಹುಲಿಯ ಚರ್ಮದ ಮೇಲೆ ಕೂತಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಶಿವಕುಮಾರ್ ಅವರು ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್ಬಾಸ್ ಮನೆಯಿಂದಲೇ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ .
