ಹೃದಯಾಘಾತ – ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ – VIshwanews24
ಹೃದಯಾಘಾತ – ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ
ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್.ಧ್ರುವನಾರಾಯಣ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.
ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್ ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕರ್ಮಕಾಂಡ : ಕಾಪುವಿನಲ್ಲಿ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಬಸ್ಸು:ಗಂಭೀರ ಗಾಯ vishwanews24
1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.
2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿ(ಜಾತ್ಯತೀತ) ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.
ಉಡುಪಿ: ಕರಾವಳಿ ಜಂಕ್ಷನ್- ಮಲ್ಪೆ ವರೆಗಿನ ಚತುಷ್ಪಥ ರಸ್ತೆ ಕಾಮಗಾರಿ ಆರಂಭ – Vishwanews24
