ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ – vishwanews24
ಹೆಜಮಾಡಿ ಟೋಲ್ ಗೇಟ್ ಬಳಿ ಪ್ರವಾಸಕ್ಕೆಂದು ಕೇರಳದಿಂದ ಬಂದಿದ್ದ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ತೊಂದರೆ
ಕಾಪು : ಕೇರಳದ ವಿದ್ಯಾರ್ಥಿಗಳ ಗುಂಪೊಂದು ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ರಸ್ತೆ ಮಧ್ಯದಲ್ಲೇ ನೃತ್ಯ ಮಾಡಿ, ಪಟಾಕಿ ಸಿಡಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ನೀಡಿದ ಘಟನೆ ನಡೆದಿದೆ.
ಉಡುಪಿಗೆ ಪ್ರವಾಸಕ್ಕೆಂದು ಕೇರಳದಿಂದ ಎರಡು ಬಸ್ಗಳಲ್ಲಿ ಬಂದಿದ್ದ ವಿದ್ಯಾರ್ಥಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಟೋಲ್ ಗೇಟ್ ಬಳಿ ಬಸ್ಗಳನ್ನು ನಿಲ್ಲಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದು ನೃತ್ಯ ಮಾಡಲು ಮತ್ತು ಪಟಾಕಿ ಸಿಡಿಸಲು ಆರಂಭಿಸಿದ್ದಾರೆ. ಇದರಿಂದಾಗಿ ವಾಹನ ಸವಾರರಿಗೆ ತೀವ್ರ ತೊಂದರೆಯುಂಟಾಗಿದ್ದು, ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ ಎಂದು ವರದಿಯಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – vishwanews24
ಜನನಿಬಿಡ ಈ ರಸ್ತೆಯಲ್ಲಿ ವಿದ್ಯಾರ್ಥಿಗಳ ಈ ಬೇಜವಾಬ್ದಾರಿ ವರ್ತನೆಯು ಸಾರ್ವಜನಿಕರಲ್ಲಿ ಸುರಕ್ಷತೆಯ ಬಗ್ಗೆ ಆತಂಕ ಸೃಷ್ಟಿಸಿದೆ. ವಿದ್ಯಾರ್ಥಿಗಳ ಈ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
