ಹೈಕೋರ್ಟ್ ಮದ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಹೋರಾಟಗಾರ್ತಿಯರು

Featured, ದೇಶ

ಹೈಕೋರ್ಟ್ ಮದ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಹಿಜಾಬ್ ಹೋರಾಟಗಾರ್ತಿಯರು

ಹೊಸದಿಲ್ಲಿ: ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಕಾಲೇಜುಗಳಲ್ಲಿ ಧಾರ್ಮಿಕ ಉಡುಗೆ ತೊಡದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ನೀಡಿದ ಮೌಖಿಕ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಗೆ ವಿಶೇಷ ಅರ್ಜಿ ಸಲ್ಲಿಸಿದ್ದಾರೆ.

ಗುರುವಾರ ವಿಚಾರಣೆಯನ್ನು ಫೆಬ್ರವರಿ 14 ಕ್ಕೆ ಮುಂದೂಡಿರುವ ಕರ್ನಾಟಕ ಹೈಕೋರ್ಟ್ ನ ತ್ರಿಸದಸ್ಯ ಪೀಠ ಈ ಕುರಿತು ಆದೇಶ ಹೊರಡಿಸುವುದಾಗಿ ಹೇಳಿದೆ.

ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸುತ್ತಿದೆ.

Leave a Reply