ಹೊರ ರಾಜ್ಯಕ್ಕೆ ತೆರಳಲು ದರ್ಶನ್ , ಪವಿತ್ರಾ ಗೌಡಗೆ ಕೋರ್ಟ್ ಅನುಮತಿ – vishwanews24
ಹೊರ ರಾಜ್ಯಕ್ಕೆ ತೆರಳಲು ದರ್ಶನ್ ಪವಿತ್ರಾ ಗೌಡಗೆ ಕೋರ್ಟ್ ಅನುಮತಿ
ಬೆಂಗಳೂರು: ಮೈಸೂರಿಗೆ ದರ್ಶನ್ ತೆರಳಲು ಮತ್ತು ಪವಿತ್ರಾ ಗೌಡಗೆ ಹೊರ ರಾಜ್ಯಕ್ಕೆ ಹೋಗಲು ಕೋರ್ಟ್ ಅನುಮತಿ ನೀಡಿದೆ.
57ನೇ ಸಿಸಿಹೆಚ್ ನ್ಯಾಯಾಧೀಶರ ಮುಂದೆ ದರ್ಶನ್ ಪರ ವಕೀಲರು ಮೈಸೂರಿಗೆ ತೆರಳಲು ಅನುಮತಿ ನೀಡಬೇಕೆಂದು ಕೇಳಿದ್ದರು. ಪವಿತ್ರಾ ಗೌಡ ಪರ ವಕೀಲರು ಹೊರ ರಾಜ್ಯಕ್ಕೆ ತೆರಳಲು ಅನುಮತಿ ನೀಡಬೇಕೆಂದು ಮನವಿ ಮಾಡಿದರು.
ಮಂಗಳೂರು: ಮಿದುಳು ನಿಷ್ಕ್ರಿಯ ; ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ – vishwanews24
ಈ ಎರಡು ಅರ್ಜಿಗಳನ್ನು ಕೋರ್ಟ್ ಮಾನ್ಯ ಮಾಡಿದೆ. ದರ್ಶನ್‌ಗೆ ಜ.12ರಿಂದ 17ರವರೆಗೆ ಮೈಸೂರಿನಲ್ಲಿ ತಂಗಲು ಅನುಮತಿ ನೀಡಿದೆ.
ಕೋರ್ಟ್ ಮುಂಬೈ ಮತ್ತು ದೆಹಲಿಗೆ ತೆರಳಲು ಪವಿತ್ರಾ ಗೌಡಗೆ ಅನುಮತಿ ನೀಡಿದೆ. ದೇವಸ್ಥಾನ ಮತ್ತು ವ್ಯವಹಾರ ಸಂಬಂಧ ಒಂದು ತಿಂಗಳ ಕಾಲ ಹೊರ ರಾಜ್ಯಕ್ಕೆ ತೆರಳಲು ಅನುಮತಿ ಕೇಳಿದ್ದರು.
ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಎಲ್ಲಾ 17 ಆರೋಪಿಗಳು ಹಾಲ್‌ಗೆ ಬಂದ ನಂತರ ನ್ಯಾಯಾಧೀಶರು ಹಾಜರಿ ಪಡೆದರು. ನ್ಯಾಯಾಧೀಶರು ಅರ್ಜಿ ವಿಚಾರಣೆಯನ್ನು ಫೆ. 25ಕ್ಕೆ ಮುಂದೂಡಿದ್ದರು.
