ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಮನೆಯಲ್ಲಿರಿ ಇಲ್ಲಾಂದ್ರೆ ಕೇಸ್ ಫಿಕ್ಸ್-ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ

Featured, ರಾಜ್ಯ ನ್ಯೂಸ್

ಬೆಂಗಳೂರು: ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಸಾರ್ವಜನಿಕವಾಗಿ ಓಡಾಡಿದರೆ ಅವರ ವಿರುದ್ಧ ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕೇಸ್ ದಾಖಲಾಗಲಿದೆ.

ಸಾರ್ವಜನಿಕವಾಗಿ ಸಂಚರಿಸಬಾರದು ಎಂದು ತಿಳಿದಿದ್ದರೂ ಈ ಕೃತ್ಯ ಎಸಗಿದರೆ ಗರಿಷ್ಠ ಆರು ತಿಂಗಳ ಶಿಕ್ಷೆ ಅಥವಾ ದಂಡ ಅಥವಾ ದಂಡ ಹಾಗೂ ಶಿಕ್ಷೆ ಎರಡನ್ನು ವಿಧಿಸಲು ಅವಕಾಶವಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ. ವಿದೇಶದಿಂದ ಆಗಮಿಸಿ ಗೃಹಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ. ಅವರನ್ನು ನಮ್ಮ ಸಿಬ್ಬಂದಿ ಹಿಡಿದು ಬಂಧಿಸಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇಡುತ್ತಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.